ADVERTISEMENT

ಆರೋಗ್ಯ ಕಾರ್ಯಕರ್ತರಿಗೆ ₹50 ಲಕ್ಷ ವಿಮೆ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ

ಪಿಟಿಐ
Published 21 ಜೂನ್ 2020, 10:37 IST
Last Updated 21 ಜೂನ್ 2020, 10:37 IST
ಆರೋಗ್ಯ ಕಾರ್ಯಕರ್ತರೊಬ್ಬರ ಸಂಗ್ರಹ ಚಿತ್ರ
ಆರೋಗ್ಯ ಕಾರ್ಯಕರ್ತರೊಬ್ಬರ ಸಂಗ್ರಹ ಚಿತ್ರ    

ನವದೆಹಲಿ: ಆರೋಗ್ಯ ಕಾರ್ಯಕರ್ತರಿಗೆ ಜಾರಿಗೊಳಿಸಲಾಗಿದ್ದ ₹50 ಲಕ್ಷ ವಿಮಾ ಯೋಜನೆಯನ್ನು ಕೇಂದ್ರ ಸರ್ಕಾರ ಸೆಪ್ಟೆಂಬರ್‌ವರೆಗೆ ವಿಸ್ತರಿಸಿದೆ.

22.12 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ನ್ಯೂ ಇಂಡಿಯಾ ಅಶ್ಯೂರೆನ್ಸ್‌ ವಿಮಾ ಕಂಪನಿ ಮೂಲಕ ಜಾರಿಗೊಳಿಸಲಾಗಿದ್ದ ಈ ಯೋಜನೆ ಜೂನ್‌ 30ಕ್ಕೆ ಮುಕ್ತಾಯವಾಗುವುದಿತ್ತು.

ಕೊರೊನಾ ವೈರಸ್‌ ಸೋಂಕಿತರ ಆರೈಕೆಯಲ್ಲಿ ತೊಡಗಿರುವ ಆರೋಗ್ಯ ಕಾರ್ಯಕರ್ತರಿಗಾಗಿ ಈ ಯೋಜನೆ ಆರಂಭಿಸಲಾಗಿತ್ತು. ವೈದ್ಯರು, ನರ್ಸ್‌ಗಳು ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಈ ವಿಮೆ ಯೋಜನೆ ವ್ಯಾಪ್ತಿಗೆ ಒಳಪಟ್ಟಿದ್ದಾರೆ. ಮಾರ್ಚ್‌ 30ರಿಂದ ಈ ಯೋಜನೆಗೆ ಚಾಲನೆ ನೀಡಲಾಗಿತ್ತು.

ADVERTISEMENT

ದೇಶದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ವಿಮಾ ಯೋಜನೆಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.