ADVERTISEMENT

ಕಬ್ಬಿಗೆ ಎಫ್‌ಆರ್‌ಪಿ ಹೆಚ್ಚಳ

ಪಿಟಿಐ
Published 3 ಆಗಸ್ಟ್ 2022, 21:00 IST
Last Updated 3 ಆಗಸ್ಟ್ 2022, 21:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸ‌ಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಲ್‌ಗೆ ಪಾವತಿಸಬೇಕಿರುವ ಮೊತ್ತವನ್ನು ಕೇಂದ್ರ ಸರ್ಕಾರವು ₹15ರಷ್ಟು ಹೆಚ್ಚಿಸಿದೆ. ಈ ವರ್ಷದ ಅಕ್ಟೋಬರ್‌ನಿಂದ ಅನ್ವಯವಾಗುವಂತೆ ಕಾರ್ಖಾನೆಗಳು ‍ಪ್ರತಿ ಕ್ವಿಂಟಲ್‌ಗೆ ₹ 305ರಷ್ಟು ಪಾವತಿಸಬೇಕಿದೆ.

2022–23ನೇ ಮಾರುಕಟ್ಟೆ ವರ್ಷಕ್ಕೆ ಅನ್ವಯ ಆ‌ಗುವಂತೆ ‘ನ್ಯಾಯಸಮ್ಮತ ಮತ್ತು ಪ್ರೋತ್ಸಾಹದಾಯಕ ದರ’ (ಎಫ್‌ಆರ್‌ಪಿ) ಹೆಚ್ಚಿಸಲು ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿಯ ಸಭೆಯು ಬುಧವಾರ ಒಪ್ಪಿಗೆ ನೀಡಿದೆ.

2021–22ರಲ್ಲಿ ನೀಡಿದ್ದ ಎಫ್‌ಆರ್‌ಪಿಗೆ ಹೋಲಿಸಿದರೆ 2022–23ರಲ್ಲಿ ಶೇ 2.6ರಷ್ಟು ಹೆಚ್ಚು ನಿಗದಿಪಡಿಸಲಾಗಿದೆಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.