ADVERTISEMENT

ವಾಯುಪಡೆಗಾಗಿ 97 ತೇಜಸ್‌ ಜೆ‌ಟ್‌ಗಳ ನಿರ್ಮಾಣಕ್ಕೆ ಎಚ್‌ಎಎಲ್ ಜೊತೆಗೆ ಒಪ್ಪಂದ

ಪಿಟಿಐ
Published 25 ಸೆಪ್ಟೆಂಬರ್ 2025, 12:56 IST
Last Updated 25 ಸೆಪ್ಟೆಂಬರ್ 2025, 12:56 IST
ತೇಜಸ್ ಜೆಟ್ (ಎಎಫ್‌ಪಿ ಸಂಗ್ರಹ ಚಿತ್ರ)
ತೇಜಸ್ ಜೆಟ್ (ಎಎಫ್‌ಪಿ ಸಂಗ್ರಹ ಚಿತ್ರ)   

ನವದೆಹಲಿ: ಭಾರತೀಯ ವಾಯುಪಡೆಗಾಗಿ ₹62,370 ಕೋಟಿ ವೆಚ್ಚದಲ್ಲಿ 97 ತೇಜಸ್ ಲಘು ಯುದ್ಧ ವಿಮಾನಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯವು ಹಿಂದೂಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್‌) ಜೊತೆಗೆ ಗುರುವಾರ ಒಪ್ಪಂದ ಮಾಡಿಕೊಂಡಿದೆ.

2027–28ರ ವೇಳೆಗೆ ಈ ಯುದ್ಧ ವಿಮಾನಗಳನ್ನು ಎಚ್‌ಎಎಲ್ ವಿತರಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಸಂಪುಟ ಸಮಿತಿ (ಸಿಸಿಎಸ್‌) ಈ ಬೃಹತ್ ಖರೀದಿಗೆ ಒಪ್ಪಿಗೆ ನೀಡಿದ ಸುಮಾರು ಒಂದು ತಿಂಗಳ ನಂತರ ಒಪ್ಪಂದ ಮಾಡಿಕೊಳ್ಳಲಾಗಿದೆ. 

ADVERTISEMENT

ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ಗೆ ನೀಡಲಾದ ಎರಡನೇ ಗುತ್ತಿಗೆ ಇದಾಗಿದೆ. 2021ರ ಫೆಬ್ರವರಿಯಲ್ಲಿ ವಾಯುಪಡೆಗಾಗಿ 83 ತೇಜಸ್ ಎಮ್‌ಕೆ–1ಎ ಜೆಟ್‌ಗಳನ್ನು ಖರೀದಿಸಲು ₹48,000 ಕೋಟಿಗಳ ಒಪ್ಪಂದವನ್ನು ಮಾಡಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.