ADVERTISEMENT

ಭಾರತ–ಪಾಕಿಸ್ತಾನ ಸಂಘರ್ಷದ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿದ ಕೇಂದ್ರ: ಖರ್ಗೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 15:59 IST
Last Updated 31 ಮೇ 2025, 15:59 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ </p></div>

ಮಲ್ಲಿಕಾರ್ಜುನ ಖರ್ಗೆ

   

–ಪಿಟಿಐ ಚಿತ್ರ

ನವದೆಹಲಿ: ಭಾರತ–ಪಾಕಿಸ್ತಾನ ಸಂಘರ್ಷದ ವಿಚಾರದಲ್ಲಿ ಕೇಂದ್ರ ಸರ್ಕಾರವು ದೇಶಕ್ಕೆ ತಪ್ಪು ಮಾಹಿತಿ ನೀಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ADVERTISEMENT

ಭಾರತದ ರಕ್ಷಣಾ ಸನ್ನದ್ಧತೆಯ ಬಗ್ಗೆ ಸ್ವತಂತ್ರವಾದ ತಜ್ಞರ ಸಮಿತಿಯಿಂದ ಸಮಗ್ರ ಪರಿಶೀಲನೆ ಆಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತಿದೆ. ‘ಕಾರ್ಗಿಲ್‌ ಪುನರ್‌ಪರಿಶೀಲನಾ ಸಮಿತಿ’ಯ ಮಾದರಿಯಲ್ಲೇ ಈ ಕೆಲಸ ಆಗಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.

‘ರಕ್ಷಣಾ ಪಡೆಗಳ ಮುಖ್ಯಸ್ಥರು (ಸಿಡಿಎಸ್) ಸಿಂಗಪುರದಲ್ಲಿ ಸಂದರ್ಶನವೊಂದರಲ್ಲಿ ಆಡಿರುವ ಮಾತುಗಳ ಹಿನ್ನೆಲೆಯಲ್ಲಿ, ಬಹಳ ಪ್ರಮುಖವಾದ ಕೆಲವು ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ಸಂಸತ್ತಿನ ವಿಶೇಷ ಅಧಿವೇಶನವೊಂದನ್ನು ತಕ್ಷಣವೇ ಕರೆದರೆ ಇದು ಸಾಧ್ಯವಾಗುತ್ತದೆ’ ಎಂದು ಖರ್ಗೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.