ನವದೆಹಲಿ: ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ವರ್ಗದ ಹುದ್ದೆಗಳು ಖಾಲಿ ಇದ್ದರೂ, ಡಿಗ್ರಿ ಪಡೆದು ನಿರುದ್ಯೋಗ ಎದುರಿಸುತ್ತಿರುವ ವಿದ್ಯಾವಂತ ಯುವ ಸಮೂಹಕ್ಕೆ ಕೇಂದ್ರ ಸರ್ಕಾರ ಉದ್ಯೋಗ ನೀಡದೇ ಶಿಕ್ಷಿಸುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
‘ವಿದ್ಯಾವಂತ ಯುವಕರು ತೀವ್ರ ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ನೈಜ ಪದವಿಗಳನ್ನುಪಡೆದಿರುವ ಒಬಿಸಿ, ಎಸ್ಸಿ ಮತ್ತು ಎಸ್ಟಿ ವರ್ಗದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಉದ್ಯೋಗ ನೀಡದೇ ಶಿಕ್ಷಿಸುತ್ತಿದೆ ‘ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಐಐಎಂನಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ವರ್ಗದವರಿಗೆ ಮೀಸಲಿಟ್ಟಿರುವ ಹುದ್ದೆಗಳು ಖಾಲಿ ಇವೆ ಎಂಬ ಮಾಧ್ಯಮದ ವರದಿಯನ್ನು ತಮ್ಮ ಟ್ವೀಟ್ ಜತೆ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.