ADVERTISEMENT

ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ರಾಷ್ಟ್ರೀಯ ಸಹಾಯವಾಣಿ ಆರಂಭಿಸಲು ಕೇಂದ್ರ ಚಿಂತನೆ

ಪಿಟಿಐ
Published 25 ನವೆಂಬರ್ 2020, 11:06 IST
Last Updated 25 ನವೆಂಬರ್ 2020, 11:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾನೂನು, ಆರೋಗ್ಯ ಮತ್ತು ಮಾನಸಿಕವಾಗಿ ಬೆಂಬಲ ಒದಗಿಸುವುದಕ್ಕಾಗಿ ರಾಷ್ಟ್ರೀಯ ಸಹಾಯವಾಣಿ ಪ್ರಾರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ವಯಂ ಸೇವಕರು ಮತ್ತು ಪಾಲುದಾರಿಕೆ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಹಾಯವಾಣಿ ಪ್ರಾರಂಭಿಸಲುಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಯೋಜನೆ ರೂಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಫೋನ್‌ ಕರೆಯ ಮೂಲಕ ಸಮಸ್ಯೆಗಳಿಗೆ ಸಮಾಧಾನ ನೀಡುವುದರ ಜತೆಗೆ ಹೆಚ್ಚಿನ ಸಹಾಯವನ್ನೂ ನೀಡಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಇದಕ್ಕಾಗಿ ದೇಶದ ಐದು ವಲಯಗಳಿಂದ ತಜ್ಞರನ್ನು ನೇಮಿಸಲಾಗುವುದು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.