ನವದೆಹಲಿ: ದೇಶದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ರಕ್ಷಣೆ, ಕಾನೂನು, ಆರೋಗ್ಯ ಮತ್ತು ಮಾನಸಿಕ ಬೆಂಬಲ ಒದಗಿಸಲು ರಾಷ್ಟ್ರೀಯ ಸಹಾಯವಾಣಿಯನ್ನು ಆರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸ್ವಯಂಸೇವಕರು ಮತ್ತು ಪಾಲುದಾರ ಸಂಸ್ಥೆಗಳೊಂದಿಗೆ ನಗರಗಳಾದ್ಯಂತ ಸಹಾಯವಾಣಿ ಪ್ರಾರಂಭಿಸಲು ಯೋಜನೆ ರೂಪಿಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದೇಶದ ಐದು ವಲಯಗಳಲ್ಲಿ ತಜ್ಞರನ್ನು ಒಳಗೊಂಡ ತಂಡಗಳನ್ನು ರಚಿಸಲಾಗುತ್ತದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಕಾನೂನು, ಆರೋಗ್ಯ ಮತ್ತು ಮಾನಸಿಕ ಬೆಂಬಲವನ್ನು ನೀಡುವ ನಿಟ್ಟಿನಲ್ಲಿ ತಜ್ಞರು ಕೆಲಸ ಮಾಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.