ADVERTISEMENT

ಭಾರತಕ್ಕೆ ಬರುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ನಿಯಮ: ಏರ್ ಸುವಿಧಾ ರದ್ದು

ಪಿಟಿಐ
Published 21 ನವೆಂಬರ್ 2022, 16:32 IST
Last Updated 21 ನವೆಂಬರ್ 2022, 16:32 IST
   

ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆ ಗಮನಾರ್ಹ ಮಟ್ಟದಲ್ಲಿ ಇಳಿದಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಇದ್ದ ಏರ್ ಸುವಿಧಾ ಅರ್ಜಿ ತುಂಬುವ ನಿಯಮಾವಳಿಯನ್ನು ಸರ್ಕಾರ ರದ್ದು ಮಾಡಿದೆ.

ಅಂತರರಾಷ್ಟ್ರೀಯ ಪ್ರಯಾಣಿಕರಿಗಾಗಿ ಪರಿಷ್ಕೃತ ನಿಯಮಾವಳಿ ನಾಳೆಯಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ.

ಕೋವಿಡ್ ಉಲ್ಬಣಗೊಂಡಿದ್ದ ಸಮಯದಲ್ಲಿ ಭಾರತಕ್ಕೆ ಬರುತ್ತಿದ್ದ ಅಂತರರಾಷ್ಟ್ರೀಯ ಪ್ರಯಾಣಿಕರಿಗಾಗಿ ಈ ನಿಯಮ ಜಾರಿಗೆ ತರಲಾಗಿತ್ತು. ಇದರನ್ವಯ ವಿದೇಶಗಳಿಂದ ಭಾರತಕ್ಕೆ ಬರುವವರು ಏರ್ ಸುವಿಧಾ ಪೋರ್ಟಲ್‌ನಲ್ಲಿ ತಾವು ಕೋವಿಡ್ ಲಸಿಕೆ ಪಡೆದಿರುವ ಮಾಹಿತಿಯನ್ನು ನಮೂದಿಸಬೇಕಿತ್ತು. ಆದರೆ, ಇನ್ನುಮುಂದೆ ಇದರ ಅಗತ್ಯವಿಲ್ಲ ಎಂದು ಸಚಿವಾಲಯ ಹೇಳಿದೆ.

ADVERTISEMENT

ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾದ ಇಳಿಕೆ ಮತ್ತು ಜಾಗತಿಕ ಹಾಗೂ ಭಾರತದಲ್ಲಿ ಕೋವಿಡ್ ಲಸಿಕೆ ವಿತರಣೆಯಲ್ಲಾಗಿರುವ ಲಸಿಕೆ ವಿತರಣೆಯನ್ನು ಗಮನದಲ್ಲಿಟ್ಟುಕೊಂಡು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ನಿಯಮಾವಳಿಗಳನ್ನು ಪರಿಷ್ಕರಿಸಲಾಗಿದೆ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.