ನವದೆಹಲಿ: ಖಾಸಗಿ ಸಹಭಾಗಿತ್ವದಲ್ಲಿ ದೇಶದಲ್ಲಿರುವ ಮೃಗಾಲಯಗಳ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಕೇಂದ್ರ ಸರ್ಕಾರ ಯೋಜನೆ ರೂಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಸೋಮವಾರ ತಿಳಿಸಿದರು.
ಆನ್‌ಲೈನ್ ಕಾರ್ಯಕ್ರಮ‘ವೈಲ್ಡ್‌ಲೈಫ್ ವೀಕ್ 2020’ರಲ್ಲಿ ಮಾತನಾಡಿದ ಜಾವಡೇಕರ್, ‘ಈ ಯೋಜನೆಗೆ ಪ್ರತ್ಯೇಕ ಅನುದಾನ ಮೀಸಲಿರಿಸಲಾಗುವುದು ಹಾಗೂ ಇದನ್ನು ಮುಂದಿನ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗುವುದು’ ಎಂದರು.
‘ದೇಶದಲ್ಲಿ 160 ಮೃಗಾಲಯಗಳಿವೆ. ಮಕ್ಕಳು ಇವುಗಳಿಗೆ ಭೇಟಿ ನೀಡಲು ಉತ್ಸುಕರಾಗಿರುತ್ತಾರೆ. ಇವರ ಅನುಭವವನ್ನು ಇಮ್ಮಡಿಗೊಳಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಯೋಜನೆ ರೂಪಿಸುವಾಗ ರಾಜ್ಯ ಸರ್ಕಾರಗಳ ಸಲಹೆ, ಸೂಚನೆಗಳನ್ನೂ ಪರಿಗಣಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.