
 ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ನವದೆಹಲಿ: ‘ಕಳಪೆ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ತಡೆಗಟ್ಟಲು ಕಠಿಣ ನಿಯಮಗಳನ್ನು ರೂಪಿಸಿ ಬಿತ್ತನೆ ಬೀಜ ಕಾಯ್ದೆಗೆ ತಿದ್ದುಪಡಿ ತರಲಾಗುವುದು’ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುರುವಾರ ಹೇಳಿದರು.
ರೈತ ಉತ್ಪಾದಕ ಸಂಘ (ಎಫ್‌ಪಿಒ) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ‘ಮುಂದಿನ ವರ್ಷದ ಬಜೆಟ್ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು’ ಎಂದರು.
‘ಕುಲಾಂತರಿ ಬಿತ್ತನೆ ಬೀಜಗಳ ಪೂರೈಕೆಗೆ ಅವಕಾಶವಿಲ್ಲ. ಜೊತೆಗೆ ಇತರೆ ಉತ್ತಮ ತಳಿಯ ಬಿತ್ತನೆ ಬೀಜಗಳನ್ನು ಅಭಿವೃದ್ಧಿಪಡಿಸಲು ಸಂಶೋಧನೆಗಳು ನಡೆಯುತ್ತಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.