ಕೋಲ್ಕತ್ತ: ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟು ಆಗಿದ್ದು, ಇದರಿಂದಾಗಿ 29 ಮಂದಿ ಮೃತಪಟ್ಟಿದ್ದಾರೆ. ಇದು ಅತ್ಯಂತ ದುರದೃಷ್ಟಕರ ವಿಷಯವಾಗಿದ್ದು, ಮನಸ್ಸಿಗೆ ನೋವಾಗಿದೆ ಎಂದು ಮಮತಾ ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಸಲುವಾಗಿ ರಾಜ್ಯ ಸರ್ಕಾರ ಪ್ರತಿ ಕುಟುಂಬಗಳಿಗೆ ತಲಾ ₹ಲಕ್ಷ ಪರಿಹಾರ ಒದಗಿಸುವುದಾಗಿ ಮಮತಾ ತಿಳಿಸಿದ್ದಾರೆ.
ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದಿದ್ದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಿಯ ವೈದ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.