ADVERTISEMENT

ಕೋವಿಡ್: ಅನಾಥ ಮಕ್ಕಳಿಗೆ ಪಿಎಂ ಕೇರ್ಸ್ ಸೌಲಭ್ಯ ನಾಳೆ ಬಿಡುಗಡೆ

ಪಿಟಿಐ
Published 29 ಮೇ 2022, 12:23 IST
Last Updated 29 ಮೇ 2022, 12:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪಿಎಂ–ಕೇರ್ಸ್ ನಿಧಿಯಡಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಬಿಡುಗಡೆ ಮಾಡಲಿದ್ದಾರೆ ಎಂದು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

ಮಾರ್ಚ್ 11,2020 ಮತ್ತು ಫೆಬ್ರುವರಿ 28, 2022ರ ನಡುವೆಕೋವಿಡ್ ಸಾಂಕ್ರಾಮಿಕದ ಕಾರಣ ತಂದೆ–ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೆರವಾಗಲು ಸರ್ಕಾರ ಕಳೆದ ವರ್ಷ ಮೇ 29ರಂದು ಕಾರ್ಯಕ್ರಮ ಪ್ರಕಟಿಸಿತ್ತು.

ಈ ಕುರಿತು ಹೇಳಿಕೆ ನೀಡಿರುವ ಸಚಿವಾಲಯವು ಪ್ರಧಾನಮಂತ್ರಿಗಳು, ಗುರುತಿಸಲಾದ, ಶಾಲೆಗೆ ತೆರಳುತ್ತಿರುವ ಮಕ್ಕಳಿಗೆ ವಿದ್ಯಾರ್ಥಿವೇತನ ಸೌಲಭ್ಯ ವರ್ಗಾಯಿಸುವರು. ಪಿಎಂ ಕೇರ್ಸ್‌ ವಿದ್ಯಾರ್ಥಿ ಪಾಸ್‌ಬುಕ್‌, ಆಯುಷ್ಮಾನ್‌ ಭಾರತ್ ಆರೋಗ್ಯ ಕಾರ್ಡ್‌, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಕಾರ್ಡ್‌ಗಳನ್ನು ಇಂತಹ ಮಕ್ಕಳಿಗೆ ವಿತರಿಸಲಾಗುತ್ತದೆ ಎಂದು ಹೇಳಿಕೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.