ADVERTISEMENT

ಶಾಲೆಯಿಂದ ಹೊರಗುಳಿದ 15 ಕೋಟಿ ಮಕ್ಕಳನ್ನು ವಾಪಸ್‌ ಕರೆತರಲಿದ್ದೇವೆ: ಪ್ರಧಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಆಗಸ್ಟ್ 2021, 8:49 IST
Last Updated 12 ಆಗಸ್ಟ್ 2021, 8:49 IST
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌   

ನವದೆಹಲಿ: ಶಾಲೆಯಿಂದ ಹೊರಗುಳಿದಿರುವ ಸುಮಾರು15 ಕೋಟಿ ಮಕ್ಕಳನ್ನು ಶಿಕ್ಷಣ ವ್ಯವಸ್ಥೆಗೆ ವಾಪಸ್‌ ಕರೆತರಲು ಕೇಂದ್ರ ಸರ್ಕಾರವು ಬಯಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಿಳಿಸಿದ್ದಾರೆ.

ʼಉದ್ಯೋಗ ಸೃಷ್ಟಿ ಮತ್ತುಉದ್ಯಮಶೀಲತೆʼ ಕುರಿತ ವಿಶೇಷ ವರ್ಚುವಲ್‌ ಸಮಾವೇಶದಲ್ಲಿ ಅವರು ಮಾತನಾಡಿದರು.

ʼಇಂದು35 ಕೋಟಿ ಮಕ್ಕಳು ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ, 15 ಕೋಟಿ ಮಕ್ಕಳು ಇನ್ನೂಶಿಕ್ಷಣದಿಂದ ಹೊರಗುಳಿದಿದ್ದಾರೆ. ನಾವು ಅವರನ್ನೆಲ್ಲ ಮತ್ತೆ ಶಿಕ್ಷಣ ವ್ಯವಸ್ಥೆಗೆ ಕರೆತರಲು ಬಯಸುತ್ತೇವೆʼ ಎಂದು ಹೇಳಿದ್ದಾರೆ.

ADVERTISEMENT

ಮುಂದುವರಿದು,ಸರ್ಕಾರವು ಇದೇ ಮೊದಲ ಬಾರಿಗೆ ಶಿಕ್ಷಣ ಮತ್ತು ಕೌಶಲ್ಯ ಇಲಾಖೆಗಳನ್ನು ಸಂಯೋಜಿಸುವ ಮೂಲಕ ಉತ್ತಮ ಜೀವನೋಪಾಯಕ್ಕೆ ಹೊಸ ಆಯಾಮ ನೀಡಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.