ನವದೆಹಲಿ: ಈರುಳ್ಳಿ ಮೇಲಿನ ರಫ್ತು ಸುಂಕದಲ್ಲಿ ಶೇ 20ರಷ್ಟನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಇದು ಏಪ್ರಿಲ್ 1ರಿಂದ ಜಾರಿಯಾಗಲಿದೆ ಎಂದು ಅದು ಹೇಳಿದೆ.
ಗ್ರಾಹಕ ವ್ಯವಹಾರಗಳ ಇಲಾಖೆಯ ಸಂವಹನದ ಬಳಿಕ ಕಂದಾಯ ಇಲಾಖೆ ಈ ಕುರಿತು ಅಧಿಸೂಚನೆ ಹೊರಡಿಸಿದೆ. ರೈತರ ಹಿತಕಾಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.