ADVERTISEMENT

ಐವರು ಪ್ರತ್ಯೇಕತಾವಾದಿಗಳ ಭದ್ರತೆ ಹಿಂಪಡೆದ ಸರ್ಕಾರ

ಪುಲ್ವಾಮಾ ದಾಳಿ ಹಿನ್ನೆಲೆ

ಏಜೆನ್ಸೀಸ್
Published 17 ಫೆಬ್ರುವರಿ 2019, 6:54 IST
Last Updated 17 ಫೆಬ್ರುವರಿ 2019, 6:54 IST
ಮಿರ್‌ವಾಯಿಜ್ ಉಮರ್ ಫಾರೂಕ್ -ಪಿಟಿಐ ಚಿತ್ರ
ಮಿರ್‌ವಾಯಿಜ್ ಉಮರ್ ಫಾರೂಕ್ -ಪಿಟಿಐ ಚಿತ್ರ   

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದಲ್ಲಿ ಐವರು ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಸರ್ಕಾರ ಹಿಂಪಡೆದಿದೆ. ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಪಾಕಿಸ್ತಾನ ಮತ್ತು ಅಲ್ಲಿನ ಬೇಹುಗಾರಿಕಾ ಸಂಸ್ಥೆ ಐಎಸ್‌ಐಯಿಂದ ನಿಧಿ ಪಡೆಯುವವರಿಗೆ ನೀಡಲಾಗಿರುವ ಭದ್ರತೆಯ ಬಗ್ಗೆ ಪರಿಶೀಲಿಸಲಾಗುವುದು.ಜಮ್ಮು ಮತ್ತು ಕಾಶ್ಮೀರದಲ್ಲಿನ ಕೆಲವರು ಐಎಸ್‌ಐ ಮತ್ತು ಭಯೋತ್ಪಾದಕ ಸಂಘಟನೆಗಳ ಜತೆ ನಂಟು ಹೊಂದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎರಡು ದಿನಗಳ ಹಿಂದಷ್ಟೇ ತಿಳಿಸಿದ್ದರು.

ಮಿರ್‌ವಾಯಿಜ್ ಉಮರ್ ಫಾರೂಕ್, ಅಬ್ದುಲ್ ಘನಿ ಭಟ್, ಬಿಲಾಲ್ ಲೋನ್, ಹಾಶಿಮ್ ಖುರೇಷಿ ಮತ್ತು ಶಬೀರ್ ಷಾ ಇವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.