ರಾಹುಲ್ ಗಾಂಧಿ
ಪಿಟಿಐ ಚಿತ್ರ
ಪಟ್ನಾ: ಬಿಹಾರದಲ್ಲಿ ಹೊಸ ಕಾರ್ಮಿಕ ಕಾಯ್ದೆ ಹಾಗೂ ಚುನಾವಣಾ ಆಯೋಗವು ತರಾತುರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಿರುವುದನ್ನು ವಿರೋಧಿಸಿ ಆರ್‌ಜೆಡಿ ಹಾಗೂ ಕಾಂಗ್ರೆಸ್ ಪಕ್ಷಗಳು ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿವೆ.
ಸೋನ್‌ಪುರ, ಹಾಜಿಪುರ ಹಾಗೂ ಜೆಹಾನಾಬಾದ್‌ನಲ್ಲಿ ಆರ್‌ಜೆಡಿ, ಕಾಂಗ್ರೆಸ್ ಹಾಗೂ ಮಹಾಘಟಬಂಧನ್ ಮೈತ್ರಿಯ ವಿವಿಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಾಕರ್ತರ ಪ್ರತಿಭಟನೆ ಮಾಡಿದರು.
ರಸ್ತೆಗಳು ಮತ್ತು ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಇದರಿಂದ ಸಂಚಾರದಲ್ಲಿ ವ್ಯತ್ಯಾಯ ಉಂಟಾಗಿತ್ತು.
ಪಟ್ನಾದ ಪ್ರತಿಭಟನೆ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.