ADVERTISEMENT

ಉತ್ತರ ಪ್ರದೇಶ | ಬಾಲಕಿಯ ಮೇಲೆ ನಿರಂತರ ಅತ್ಯಾಚಾರ: ತಂದೆ, ಚಿಕ್ಕಪ್ಪ, ಅಜ್ಜನ ಬಂಧನ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2024, 11:32 IST
Last Updated 28 ಡಿಸೆಂಬರ್ 2024, 11:32 IST
<div class="paragraphs"><p>ಅತ್ಯಾಚಾರ (ಸಾಂದರ್ಭಿಕ ಚಿತ್ರ)</p></div>

ಅತ್ಯಾಚಾರ (ಸಾಂದರ್ಭಿಕ ಚಿತ್ರ)

   

ಔರೈಯಾ (ಉತ್ತರ ಪ್ರದೇಶ): ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ ಬಾಲಕಿಯ ತಂದೆ, ಚಿಕ್ಕಪ್ಪ ಮತ್ತು ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಘಟನೆ ಸಂಬಂಧ ಸಂತ್ರಸ್ತ ಬಾಲಕಿಯು ಬಿಧುನಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಲೋಕ್ ಮಿಶಾ ತಿಳಿಸಿದ್ದಾರೆ.

ADVERTISEMENT

‘ಕಳೆದ ಹಲವು ತಿಂಗಳಿನಿಂದ ನನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪ ತನ್ನನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದರು ಎಂದು ಬಾಲಕಿ ಅಳಲು ತೋಡಿಕೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದ್ದು, ಆಕೆ ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ’ ಎಂದು ಮಿಶ್ರಾ ಹೇಳಿದರು.

ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಿಶ್ರಾ ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಎಫ್) (ಸಂಬಂಧಿ, ರಕ್ಷಕ ಅಥವಾ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯಿಂದ ಅತ್ಯಾಚಾರ), 65 (1) (16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ), 232 (ಯಾವುದೇ ವ್ಯಕ್ತಿಗೆ ಬೆದರಿಕೆ ಹಾಕುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿಯೂ (ಪೋಕ್ಸೊ) ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.