ADVERTISEMENT

ಕ್ವಾರಂಟೈನ್‌ ಪೂರ್ಣಗೊಳಿಸಿದ ಎರಡು ಚೀತಾಗಳು ವಿಶಾಲ ಅರಣ್ಯ ಪ್ರದೇಶಕ್ಕೆ ಬಿಡುಗಡೆ

ಪಿಟಿಐ
Published 6 ನವೆಂಬರ್ 2022, 12:48 IST
Last Updated 6 ನವೆಂಬರ್ 2022, 12:48 IST
ಕ್ವಾರಂಟೈನ್  ಅವಧಿ ಪೂರ್ಣಗೊಳಿಸಿದ ಎರಡನ್ನು ಎರಡು ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಯಿತು. ಪಿಟಿಐ ಚಿತ್ರ
ಕ್ವಾರಂಟೈನ್  ಅವಧಿ ಪೂರ್ಣಗೊಳಿಸಿದ ಎರಡನ್ನು ಎರಡು ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಯಿತು. ಪಿಟಿಐ ಚಿತ್ರ   

ನವದೆಹಲಿ: ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಆಗಮಿಸಿರುವ ಎಲ್ಲಾ ಎಂಟು ಚೀತಾಗಳು ಆರೋಗ್ಯಕರ ಮತ್ತು ಸಕ್ರಿಯವಾಗಿದ್ದು, ಈ ಪರಿಸರಕ್ಕೆ ಹೊಂದಿಕೊಳ್ಳುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂತಸ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್ ಮಧ್ಯಭಾಗದಲ್ಲಿ ನಮೀಬಿಯಾದಿಂದ ತಂದಿದ್ದ ಅವುಗಳನ್ನು ಇರಿಸಲಾಗಿದ್ದ ಕ್ವಾರಂಟೈನ್ ಪ್ರದೇಶದಿಂದ ಎರಡು ಚೀತಾಗಳನ್ನು ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಿರುವುದು ಒಳ್ಳೆಯ ಸುದ್ದಿ ಎಂದು ಅವರು ಬಣ್ಣಿಸಿದ್ದಾರೆ.

‘ಒಳ್ಳೆಯ ಸುದ್ದಿ. ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಎರಡು ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ.ಉಳಿದವುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಎರಡು ಚೀತಾಗಳ ವಿಡಿಯೊ ಹಂಚಿಕೊಂಡಿದ್ದಾರೆ.

ADVERTISEMENT

ಸೆ.17ರಂದು ನಮೀಬಿಯಾದಿಂದ ಐದು ಹೆಣ್ಣು ಮತ್ತು ಮೂರು ಗಂಡು ಚೀತಾಗಳನ್ನು ಭಾರತಕ್ಕೆ ತರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.