ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ 6 ಮಂದಿ ಸಿಆರ್ಪಿಎಫ್ ಯೋಧರು ಗಾಯಗೊಂಡಿದ್ದಾರೆ.
ಶ್ರೀನಗರದ ಕರಣ್ನಗರದಲ್ಲಿ ಈ ಘಟನೆ ನಡೆದಿದ್ದು, ಉಗ್ರರು ಗ್ರೆನೇಡ್ ದಾಳಿ ನಡೆಸಿದ ಪರಿಣಾಮ ಗಸ್ತಿನಲ್ಲಿದ್ದ 6 ಮಂದಿ ಕೇಂದ್ರ ಮೀಸಲು ಪೊಲೀಸ್ ಪಡೆಯ 6 ಮಂದಿ ತೀವ್ರ ಗಾಯಗೊಂಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಹೆಚ್ಚಿನ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿಭಾರತೀಯ ಸೇನೆ ತನ್ನ ಪ್ರಯತ್ನ ಮುಂದುವರಿಸಿದೆ. ಗಾಯಗೊಂಡವರನ್ನು ಸೇನೆಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.