ಜಮ್ಮು : ಜಮ್ಮು– ಕಾಶ್ಮೀರದ ಪೂಂಛ್ ಜಿಲ್ಲೆಯ ಸುರಾನಕೋಟ್ ಸೇನಾ ನೆಲೆ ಮೇಲೆ ಭಯೋತ್ಪಾದಕರು ಬುಧವಾರ ಬೆಳಗಿನ ಜಾವ ಗ್ರೆನೇಡ್ ದಾಳಿ ನಡೆಸಿದ್ದಾರೆ.
ಉಗ್ರರು ಹಾರಿಸಿದ ಎರಡು ಗ್ರೆನೇಡ್‌ಗಳಲ್ಲಿ ಒಂದು ಸ್ಫೋಟಗೊಂಡಿದ್ದು, ಯಾವುದೇ ರೀತಿಯ ಹಾನಿಯಾಗಿಲ್ಲ. ಮತ್ತೊಂದನ್ನು ತಜ್ಞರು ನಿಷ್ಕ್ರಿಯಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿ ಪರಾರಿಯಾದ ಭಯೋತ್ಪಾದಕರ ಪತ್ತೆಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.