ಶ್ರೀನಗರ (ಪಿಟಿಐ): ‘ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗ್ರೆನೇಡ್ ದಾಳಿ ನಡೆದಿದ್ದು, ಪೊಲೀಸರೊಬ್ಬರು ಸಾವಿಗೀಡಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯು ದಕ್ಷಿಣ ಕಾಶ್ಮೀರದ ಖೈಮೋಹ್ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದಿದೆ.
‘ಖೈಮೋಹ್ನಲ್ಲಿ ಶನಿವಾರ ರಾತ್ರಿ ಗ್ರೆನೇಡ್ ದಾಳಿ ನಡೆದಿದ್ದು, ಪೂಂಛ್ನ ಮೆಂಧರ್ ನಿವಾಸಿಯಾಗಿರುವ ತಾಹಿರ್ ಖಾನ್ ಎಂಬ ಪೊಲೀಸ್ ಗಾಯಗೊಂಡಿದ್ದರು. ಅವರನ್ನು ಅನಂತ್ನಾಗ್ನ ಜಿಎಮ್ಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಸಾವಿಗೀಡಾಗಿದ್ದಾರೆ ’ ಎಂದು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.