ADVERTISEMENT

ವಿದ್ಯುತ್, ಸಿಮೆಂಟ್ ಸೇರಿ ಪ್ರಮುಖ ಕೈಗಾರಿಕೆಗಳ ಆರ್ಥಿಕ ಬೆಳವಣಿಗೆ ಭಾರೀ ಕುಸಿತ

ಜುಲೈ ತಿಂಗಳಲ್ಲಿ ಶೇ 2.1ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2019, 8:41 IST
Last Updated 3 ಸೆಪ್ಟೆಂಬರ್ 2019, 8:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ವಿದ್ಯುತ್, ಕಚ್ಚಾ ತೈಲ, ಸಿಮೆಂಟ್ ಸೇರಿದಂತೆ ಪ್ರಮುಖ 8 ಕೈಗಾರಿಕಾ ವಲಯಗಳ ಆರ್ಥಿಕ ಬೆಳವಣಿಗೆ ಪ್ರಮಾಣ ಜುಲೈನಲ್ಲಿ ಶೇ 2.1ಕ್ಕೆ ಕುಸಿದಿದೆ ಎಂದು ಸರ್ಕಾರಸೋಮವಾರ ಬಿಡುಗಡೆ ಮಾಡಿದ ಅಂಕಿಅಂಶ ತಿಳಿಸಿದೆ.

ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಪೆಟ್ರೋಲಿಯಂ ಉತ್ಪನ್ನಗಳು, ರಸಗೊಬ್ಬರ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್‌ ವಲಯಗಳ ಬೆಳವಣಿಗೆ ದರ ಕಳೆದ ವರ್ಷ ಜುಲೈನಲ್ಲಿ ಶೇ 7.3ರಷ್ಟಿತ್ತು. ಆದರೆ ಈ ವರ್ಷ ಜುಲೈನಲ್ಲಿ ಶೇ 2.1ರಷ್ಟಿದೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳನ್ನು ಉಲ್ಲೇಖಿಸಿದಿ ಇಂಡಿಯನ್ ಎಕ್ಸ್‌ಪ್ರೆಸ್ವರದಿ ಮಾಡಿದೆ.

ಕೈಗಾರಿಕಾ ಉತ್ಪಾದನೆ ಸೂಚ್ಯಂಕದಲ್ಲಿ (ಐಐಪಿ) ಈ ಕೈಗಾರಿಕೆಗಳ ಕೊಡುಗೆ ಶೇ 40.27ರಷ್ಟಿದೆ.

ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ವಲಯಗಳು ಕ್ರಮವಾಗಿ ಶೇ 6.6, ಶೇ 7.9 ಮತ್ತು ಶೇ 4.2 ಇಳಿಕೆ ಕಂಡಿವೆ. ಇವು ಕಳೆದ ವರ್ಷ ಕ್ರಮವಾಗಿ ಶೇ 6.9, ಶೇ 11.2 ಹಾಗೂ ಶೇ 6.7ರ ಬೆಳವಣಿಗೆ ಕಂಡಿದ್ದವು ಎಂದು ವರದಿ ತಿಳಿಸಿದೆ.

ಆದಾಗ್ಯೂ, ರಸಗೊಬ್ಬರ ಕೈಗಾರಿಕೆ ತುಸು ಸುಧಾರಣೆ ಕಂಡಿದ್ದು ಶೇ 1.5 ದಾಖಲಾಗಿದೆ. ಇದು ಕಳೆದ ವರ್ಷ ಜುಲೈನಲ್ಲಿ ಶೇ 1.3ರಷ್ಟು ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.