ಚೆನ್ನೈ: ಜಿಎಸ್‌ಟಿ ಸುಧಾರಣೆಗಳು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಿಕ್ಕ ದೊಡ್ಡ ಜಯ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಸಮಯದಲ್ಲಿ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರುವಂತೆ ಸೂಚನೆ ನೀಡಿದ್ದರು. ಆದರೆ ದೀಪಾವಳಿ ಹಬ್ಬಕ್ಕೂ ಮುಂಚಿತವಾಗಿ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ ಎಂದರು.
ತೆರಿಗೆ ಸುಧಾರಣೆಗಳು ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶೇ 12ರ ಸ್ಲ್ಯಾಬ್‌ನಲ್ಲಿದ್ದ ಶೇ 99ರಷ್ಟು ವಸ್ತುಗಳನ್ನು ಶೇ 5ರ ಸ್ಲ್ಯಾಬ್‌ಗೆ ತರಲಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಇತ್ತೇಚೆಗೆ ಘೋಷಣೆ ಮಾಡಿರುವ ಜಿಎಸ್‌ಟಿ ಸುಧಾರಣೆಗಳು ಸೆಪ್ಟೆಂಬರ್ 22ರಿಂದ ಜಾರಿಗೆ ಬರಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.