ಹೈದರಾಬಾದ್: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪರಿಷ್ಕರಣೆಯಿಂದ ರಾಜ್ಯಗಳಿಗೆ ಉಂಟಾಗುವ ನಷ್ಟವನ್ನು ಐದು ವರ್ಷ ಕೇಂದ್ರ ಸರ್ಕಾರ ಭರಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರು ಸೋಮವಾರ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಎಸ್‌ಟಿ ಅನುಷ್ಠಾನಗೊಂಡಾಗ ಅದರಿಂದ ರಾಜ್ಯಗಳಿಗೆ ಆಗುವ ನಷ್ಟವನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು’ ಎಂದರು.
ತೆರಿಗೆ ಹಂತಗಳ ಬದಲಾವಣೆಯಿಂದ ಆದಾಯವು ಕಡಿಮೆಯಾದಲ್ಲಿ ಆ ನಷ್ಟವನ್ನು ಕೇಂದ್ರ ಸರ್ಕಾರ ಭರಿಸಬೇಕು. ನಿರೀಕ್ಷಿತ ಆದಾಯದ ಆಧಾರದಲ್ಲಿ ರಾಜ್ಯಗಳು ಕಾರ್ಯಕ್ರಮಗಳನ್ನು ರೂಪಿಸಿರುತ್ತವೆ. ಈ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.