ADVERTISEMENT

ಪ್ರತ್ಯೇಕ ಚುನಾವಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 19:42 IST
Last Updated 17 ಜೂನ್ 2019, 19:42 IST
   

ನವದೆಹಲಿ: ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುಜರಾತ್‌ನಿಂದ ನಡೆಯಲಿರುವ ಚುನಾವಣೆಯನ್ನು ಪ್ರತ್ಯೇಕವಾಗಿ ನಡೆಸುವ ಚುನಾವಣಾ ಆಯೋಗದ ತೀರ್ಮಾನವನ್ನು ಪ್ರಶ್ನಿಸಿ, ಕಾಂಗ್ರೆಸ್‌ನ ಗುಜರಾತ್‌ ಘಟಕವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಗೃಹ ಸಚಿವ ಅಮಿತ್ ಶಾ ಮತ್ತು ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಈ ಸ್ಥಾನಗಳು ತೆರವಾಗಿವೆ.

‘ಆಯೋಗದ ಅಧಿಸೂಚನೆ ಅಸಾಂವಿಧಾನಿಕ. ಪ್ರತಿ ಸ್ಥಾನಕ್ಕೂ ಪ್ರತ್ಯೇಕ ಚುನಾವಣೆ ನಡೆಸಿದರೆ ಕಾಂಗ್ರೆಸ್‌ ಪಕ್ಷ ಒಂದು ಸ್ಥಾನ ಗೆಲ್ಲುವ ಅವಕಾಶ ಕಳೆದುಕೊಳ್ಳಲಿದೆ’ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಅಮಿತ್‌ ಚಾವ್ಡಾ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.