ಚೈತ್ರ ವಾಸವ
ಅಹಮದಾಬಾದ್: ಗುಜರಾತ್ ರಾಜ್ಯದ ಎಎಪಿ ಶಾಸಕ ಚೈತ್ರ ವಾಸವ ಅವರನ್ನು ಕೊಲೆ ಯತ್ನ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ನರ್ಮದಾ ಜಿಲ್ಲೆಯ ದೇಡಿಯಾಪಾಡಾದಲ್ಲಿ ತಾಲ್ಲೂಕು ಪಂಚಾಯತ್ ಸದಸ್ಯನ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಚೈತ್ರ ವಾಸವ ಅವರನ್ನು ಬಂಧಿಸಲಾಗಿದೆ.
ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನನ್ನ ಮೇಲೆ ಮೊಬೈಲ್ ಫೋನ್ ಹಾಗೂ ಗಾಜಿನಿಂದ ಹಲ್ಲೆ ಮಾಡಲಾಗಿದ್ದು ನನಗೆ ಗಾಯಗಳಾಗಿವೆ ಎಂದು ಪಂಚಾಯತ್ ಸದಸ್ಯ ಸಂಜೀವ್ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.