ADVERTISEMENT

ಹಿಮ್ಮತ್‌ನಗರ: ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ ಆರಂಭ

ಪಿಟಿಐ
Published 26 ಏಪ್ರಿಲ್ 2022, 12:24 IST
Last Updated 26 ಏಪ್ರಿಲ್ 2022, 12:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹಿಮ್ಮತ್‌ನಗರ: ರಾಮನವಮಿ ಆಚರಣೆಯ ವೇಳೆ ಹಿಂಸಾಚಾರ ನಡೆದಿದ್ದ ಗುಜರಾತ್‌ನ ಹಿಮ್ಮತ್‌ನಗರದಲ್ಲಿ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ಛಪಾರಿಯಾ ಪ್ರದೇಶದಲ್ಲಿ ನಗರಸಭೆ ಅಧಿಕಾರಿಗಳು ಬುಲ್ಡೋಜರ್‌ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಏಪ್ರಿಲ್‌ 10ರಂದು ರಾಮನವಮಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಈ ಪ್ರದೇಶದಲ್ಲಿ ಹಿಂಸಾಚಾರ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದರು. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.