ADVERTISEMENT

ಗುಜರಾತ್ ಚುನಾವಣೆ: ದಾಖಲೆಯ ಮತದಾನ ನಡೆಯಲಿ ಎಂದು ಪ್ರಧಾನಿ ಮೋದಿ ಕರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಡಿಸೆಂಬರ್ 2022, 3:24 IST
Last Updated 1 ಡಿಸೆಂಬರ್ 2022, 3:24 IST
ಪ್ರಧಾನಿ ಮೋದಿ
ಪ್ರಧಾನಿ ಮೋದಿ   

ಅಹಮದಾಬಾದ್: ಗುಜರಾತ್ ವಿಧಾನಸಭೆಗೆ ಇಂದು ಮೊದಲ ಹಂತದ ಮತದಾನ ಆರಂಭವಾಗಿದ್ದು. ಸೌರಾಷ್ಟ್ರ, ಕಛ್, ದಕ್ಷಿಣ ಭಾಗ ಒಳಗೊಂಡ 19 ಜಿಲ್ಲೆಗಳ 89 ಕ್ಷೇತ್ರಗಳಿಗೆ ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. 70 ಮಹಿಳೆಯರು ಸೇರಿ ಒಟ್ಟಾರೆ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ತಮ್ಮ ತವರು ರಾಜ್ಯದ ಚುನಾವಣೆ ಬಗ್ಗೆ ಟ್ವೀಟ್ ಮಾಡಿ ಶುಭಕೋರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆಯಲಿ ಎಂದು ಕರೆ ಕೊಟ್ಟಿದ್ದಾರೆ.

ಇಂದು ಗುಜರಾತ್ ಚುನಾವಣೆಯ ಮೊದಲ ಹಂತದ ಮತದಾನ. ಮತದಾನ ಮಾಡುವ ಎಲ್ಲರಿಗೂ, ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

14,382 ಮತಗಟ್ಟೆಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. 2017ರ ಚುನಾವಣೆಯಲ್ಲಿ ಈ 89 ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳನ್ನು ಆಡಳಿತಾರೂಢ ಬಿಜೆಪಿ ಗೆದ್ದುಕೊಂಡಿತ್ತು. 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.