ADVERTISEMENT

ಗುಜರಾತ್ ಚುನಾವಣೆ| ಶೇ 20 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣ

ಗುಜರಾತ್ ಚುನಾವಣೆ: 330 ಅಭ್ಯರ್ಥಿಗಳ ವಿರುದ್ಧ ಅತ್ಯಾಚಾರ, ಕೊಲೆ, ಭ್ರಷ್ಟಾಚಾರದ ಆರೋಪ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 18:35 IST
Last Updated 28 ನವೆಂಬರ್ 2022, 18:35 IST
   

ಅಹಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ
ರುವ 1,621 ಅಭ್ಯರ್ಥಿಗಳ ಪೈಕಿ 330 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾ ಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಮಾಡಿದೆ. 2017ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 238 ಅಭ್ಯರ್ಥಿಗಳ ಮೇಲೆ ಇಂತಹ ಆರೋಪಗಳು ದಾಖಲಾಗಿದ್ದವು.

ಕ್ರಿಮಿನಲ್ ಪ್ರಕರಣ ದಾಖಲಾಗಿರುವ ಅಭ್ಯರ್ಥಿಗಳು ಹೆಚ್ಚಾಗಿ ಆಮ್ ಆದ್ಮಿ ಪಕ್ಷದಲ್ಲಿ ಇದ್ದಾರೆ. ಪಕ್ಷದ 61 ಅಭ್ಯರ್ಥಿಗಳು ವಿವಿಧ ಸ್ವರೂಪದ ಕ್ರಿಮಿನಲ್ ಆರೋಪಗಳನ್ನು ಎದುರಿಸು
ತ್ತಿದ್ದಾರೆ. ಕಾಂಗ್ರೆಸ್‌ನ 30 ಹಾಗೂ ಆಡಳಿತಾರೂಢ ಬಿಜೆಪಿಯ 32 ಅಭ್ಯರ್ಥಿಗಳು ನಂತರದ ಸ್ಥಾನಗಳಲ್ಲಿ ದ್ದಾರೆ. 192 ಅಭ್ಯರ್ಥಿಗಳ ಮೇಲೆ ಅತ್ಯಾಚಾರ, ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ.

ಹಲ್ಲೆ, ಕೊಲೆ, ಅಪಹರಣ, ಅತ್ಯಾಚಾರ, ಮಹಿಳೆಯರ ಮೇಲೆ ದೌರ್ಜನ್ಯ, ಭ್ರಷ್ಟಾಚಾರದಂತಹ ಜಾಮೀನು ರಹಿತ ಪ್ರಕರಣಗಳಲ್ಲಿ ಇವರು ಆರೋಪಿಗಳಾಗಿದ್ದು, ಆರೋಪ ಸಾಬೀತಾದರೆ ಗರಿಷ್ಠ ಐದು ವರ್ಷಗಳ ವರೆಗೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ಎಡಿಆರ್ ಹೇಳಿದೆ. 18 ಅಭ್ಯರ್ಥಿಗಳು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿ ಸುತ್ತಿದ್ದಾರೆ. 20 ಜನರು ಕೊಲೆ ಯತ್ನ ಆರೋಪ ಹೊಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.