ADVERTISEMENT

Gujarat Election Results: ಹಾರ್ದಿಕ್ ಪಟೇಲ್‌ಗೆ ಗೆಲುವು

ಪಿಟಿಐ
Published 8 ಡಿಸೆಂಬರ್ 2022, 9:55 IST
Last Updated 8 ಡಿಸೆಂಬರ್ 2022, 9:55 IST
ಹಾರ್ದಿಕ್ ಪಟೇಲ್
ಹಾರ್ದಿಕ್ ಪಟೇಲ್   

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ ಗೆಲುವು ದಾಖಲಿಸಿದ್ದಾರೆ.

ವೀರಂಗಂ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ ಪಾಟೀದಾರ್ ನಾಯಕ ಹಾರ್ದಿಕ್ ಪಟೇಲ್‌ ಅವರು ತಮ್ಮ ಸಮೀಪದ ಸ್ಪರ್ಧಿಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಅಮರ್‌ಸಿಂಗ್ ಠಾಕೂರ್‌ ಅವರನ್ನು ಸೋಲಿಸಿದರು.

ಇಲ್ಲಿ ಕಾಂಗ್ರೆಸ್‌ನ ಹಾಲಿ ಶಾಸಕನಿಗೆ ಹಿನ್ನಡೆಯಾಗಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.

ADVERTISEMENT

ಗುಜರಾತ್ ವಿಧಾನಸಭೆ ಚುನಾವಣೆಗೂ ಮುನ್ನ ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.