ADVERTISEMENT

ಜನರಲ್ಲಿ ಭಯ ಹುಟ್ಟಿಸಿ, ಕೊಲ್ಲಲು ಸಂಚು: ಯುವಕನಿಗೆ ಖೆಡ್ಡಾ ತೋಡಿದ ಪೊಲೀಸರು

ಸತೀಶ್ ಝಾ
Published 27 ಜನವರಿ 2026, 7:46 IST
Last Updated 27 ಜನವರಿ 2026, 7:46 IST
<div class="paragraphs"><p>ಫೈಜಾನ್&nbsp;ಶೇಖ್‌</p></div>

ಫೈಜಾನ್ ಶೇಖ್‌

   

ಅಹಮದಾಬಾದ್: ಸಾರ್ವಜನಿಕರಲ್ಲಿ ಭಯ ಹುಟ್ಟಿಸಿ, ಆಯ್ದ ವ್ಯಕ್ತಿಗಳನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 25ರಂದು ನವಸಾರಿ ಜಿಲ್ಲೆಯ ಚಾರ್ಪುಲ್‌ನಲ್ಲಿ ಫೈಜಾನ್ ಶೇಖ್‌ನನ್ನು ಬಂಧಿಸಲಾಗಿದೆ ಎಂದು ಎಟಿಎಸ್ ತಿಳಿಸಿದೆ. ಆರೋಪಿಯು ಜೈಶ್-ಎ-ಮೊಹಮ್ಮದ್ ಮತ್ತು ಅಲ್ ಖೈದಾ ಭಯೋತ್ಪಾದಕ ಸಂಘಟನೆಗಳ ಸಿದ್ಧಾಂತಗಳಿಂದ ಪ್ರಭಾವಿತನಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಉದ್ದೇಶದಿಂದ ಉತ್ತರ ಪ್ರದೇಶ ಮೂಲದ ಫೈಜಾನ್, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಖರೀದಿಸಿದ್ದ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದರೂ, ಇದೇ ರೀತಿಯ ಆರೋಪದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಿದ ಎರಡು ತಿಂಗಳ ನಂತರ ಈ ಪ್ರಕರಣ ವರದಿಯಾಗಿದೆ. 2025ರ ನವೆಂಬರ್‌ನಲ್ಲಿ ಹೈದರಾಬಾದ್ ನಿವಾಸಿ ಅಹ್ಮದ್ ಮೊಹಿಯುದ್ದೀನ್ ಸಯ್ಯದ್, ಉತ್ತರ ಪ್ರದೇಶದ ಆಜಾದ್ ಸುಲೇಮಾನ್ ಶೇಖ್ ಮತ್ತು ಮೊಹಮ್ಮದ್ ಸುಹೈಲ್ ಮೊಹಮ್ಮದ್ ಸಲೀಮ್ ಎಂಬುವರನ್ನು ಎಟಿಎಸ್ ಬಂಧಿಸಿತ್ತು.

ಸಯ್ಯದ್ ಚೀನಾದಲ್ಲಿ ವೈದ್ಯಕೀಯ ಅಧ್ಯಯನ ಮಾಡಿದ್ದರು. ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ಆರೋಪಿಸಲಾಗಿದೆ. ಈತ ‌ನಿಷೇಧಿತ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ಸ್‌ನಿಂದ ಪ್ರಭಾವಿತನಾಗಿದ್ದ. ಈತನ ಬಳಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.