ಸಿ.ಆರ್. ಪಾಟೀಲ, ಜಗದೀಶ್ ವಿಶ್ವಕರ್ಮ, ಭೂಪೇಂದ್ರ ಪಟೇಲ್
ಅಹಮದಾಬಾದ್: ಗುಜರಾತ್ ಬಿಜೆಪಿಯ ನೂತನ ಅಧ್ಯಕ್ಷರಾಗಿ ಆ ರಾಜ್ಯದ ಹಿಂದುಳಿದ ವರ್ಗಗಳ ನಾಯಕ ಎಂದು ಗುರುತಿಸಿಕೊಂಡಿರುವ ಜಗದೀಶ್ ವಿಶ್ವಕರ್ಮ ಆಯ್ಕೆಯಾಗಿದ್ದಾರೆ.
ರಾಜ್ಯಾಧ್ಯಕ್ಷರ ಚುನಾವಣೆಯ ನೇತೃತ್ವ ವಹಿಸಿದ್ದ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಇಂದು ಅಹಮದಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಗದೀಶ್ ವಿಶ್ವಕರ್ಮ ಅವರ ಆಯ್ಕೆಯನ್ನು ಘೋಷಣೆ ಮಾಡಿದರು.
ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಸಿಆರ್ ಪಾಟೀಲ ಅವರ ಅವಧಿ ಕೊನೆಗೊಂಡಿದ್ದರಿಂದ ಚುನಾವಣೆ ನಡೆಯಿತು. ಜಗದೀಶ್ ವಿಶ್ವಕರ್ಮ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರು. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಗದೀಶ್ ವಿಶ್ವಕರ್ಮ ಅವರು ಇನ್ನು ಮೂರು ವರ್ಷ ಬಿಜೆಪಿ ಗುಜರಾತ್ ರಾಜ್ಯಾಧ್ಯಕ್ಷರಾಗಿ ಇರಲಿದ್ದಾರೆ.
ಅಹಮದಾಬಾದ್‌ನ ನಿಕೋಲ್ ಕ್ಷೇತ್ರದ ಶಾಸಕರಾಗಿರುವ ಜಗದೀಶ್ ವಿಶ್ವಕರ್ಮ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರ ಸಂಪುಟದಲ್ಲಿ ಸಹಕಾರ ಹಾಗೂ ಸಣ್ಣ ಕೈಗಾರಿಕೆಗಳ ಸಚಿವರಾಗಿದ್ದಾರೆ.
ಅಮಿತ್ ಶಾ ಹಾಗೂ ಮೋದಿ ಅವರ ನೇತೃತ್ವದಲ್ಲಿ ಪಕ್ಷಕ್ಕಾಗಿ ಉತ್ತಮ ಕೆಲಸಗಳನ್ನು ಮಾಡುತ್ತಾ ಹೆಚ್ಚು ಪಕ್ಷ ಸಂಘಟನೆ ಮಾಡಲಾಗುವುದು ಎಂದು ವಿಶ್ವಕರ್ಮ ಅವರು ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.