ಅಹಮದಾಬಾದ್: ಗುಜರಾತಿನ ಮೊರ್ಬಿ ಪ್ರದೇಶದ ಮಚ್ಚು ನದಿಯ ದಡದಲ್ಲಿ ನಿರ್ಮಿಸಲಾಗಿದ್ದ ತೂಗು ಸೇತುವೆ ಭಾನುವಾರ ಸಂಜೆ ಕುಸಿದಿದೆ.
ಅವಘಡದಲ್ಲಿ 100ಕ್ಕೂ ಹೆಚ್ಚು ಮಂದಿ ನೀರುಪಾಲಾಗಿದ್ದಾರೆ ಎಂದು ವರದಿಯಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
‘ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತದ ದುರಂತದಿಂದ ತೀವ್ರ ನೋವುಂಟಾಗಿದೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿವೆ. ಗಾಯಗೊಂಡವರಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ’ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.
ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.