ನವದೆಹಲಿ: ಗುಜರಾತ್ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾ ಅವರು ದೆಹಲಿ ಪೊಲೀಸ್ ಕಮಿಷನರ್ ಆಗಿ ಬುಧವಾವಾರ ಅಧಿಕಾರ ವಹಿಸಿಕೊಂಡರು.
ಇದೇ 31ರಂದು ನಿವೃತ್ತರಾಗಲಿದ್ದ ಅಸ್ತಾನ ಅವರನ್ನು ನಿವೃತ್ತಿಗೆ ಕೆಲವೇ ದಿನಗಳು ಬಾಕಿ ಇರುವಾಗ ದೆಹಲಿ ಪೊಲೀಸ್ ಕಮಿಷನರ್ ಆಗಿ ನೇಮಿಸಿರುವುದರಿಂದ ಅವರ ಅಧಿಕಾರಾವಧಿ ಒಂದು ವರ್ಷ ಮುಂದುವರಿಯಲಿದೆ.
ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ (ಎಜಿಎಂಯುಟಿ) ಕೇಡರ್ ಹೊರಗಿನ ಐಪಿಎಸ್ ಅಧಿಕಾರಿಯನ್ನು ದೆಹಲಿ ಪೊಲೀಸ್ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ ಕೆಲವೇ ನಿದರ್ಶನಗಳಲ್ಲಿ ಅಸ್ತಾನಾ ನೇಮಕವೂ ಒಂದೆನಿಸಿದೆ.
1984 ಬ್ಯಾಚ್‌ನ ಅಧಿಕಾರಿಯಾಗಿರುವ ರಾಕೇಶ್ ಅವರು ಸಿಬಿಐನ ವಿಶೇಷ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಆಗ, ಸಿಬಿಐನ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಅವರೊಂದಿಗಿನ ಜಟಾಪಟಿ ಚರ್ಚೆಗೆ ಗ್ರಾಸವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.