ಕೋಮು ಗಲಭೆಗೆ ಕಾರಣವಾದ ಸಾಮಾಜಿಕ ಜಾಲತಾಣದ ಪೋಸ್ಟ್
ಚಿತ್ರಕೃಪೆ: ಎಕ್ಸ್
ಅಹಮದಾಬಾದ್: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ವ್ಯಕ್ತಿಯೊಬ್ಬ ಹಂಚಿಕೊಂಡ ಪೋಸ್ಟ್‌ನಿಂದಾಗಿ ಆಕ್ರೋಶಗೊಂಡ ಮುಸ್ಲಿಂ ಸಮುದಾಯದ ಗುಂಪೊಂದು ಗಾಂಧಿನಗರ ಜಿಲ್ಲೆಯ ಬಹಿಯಾಲ್ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಿ ಗಲಭೆ ನಡೆಸಿದೆ.
ಘಟನೆಗೆ ಸಂಬಂಧಿಸಿದಂತೆ ಬಹಿಯಾಲ್ ಗ್ರಾಮದಿಂದ 60 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಂಪಿನ ದಾಳಿಯಿಂದ ನಾಲ್ಕು ಅಂಗಡಿಗಳಿಗೆ ಮತ್ತು ಆರು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‘ಐ ಲವ್ ಮುಹಮ್ಮದ್’ ಎಂಬ ಪೋಸ್ಟ್‌ಗೆ ಹಿಂದೂ ವ್ಯಕ್ತಿಯೊಬ್ಬ ‘ಐ ಲವ್ ಮಹಾದೇವ್’ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಇದು ಗಲಭೆಗೆ ಕಾರಣವಾಗಿದೆ ಎಂದು ಗಾಂಧಿನಗರ ಎಸ್ಪಿ ರವಿತೇಜ ವಾಸಮಸೆಟ್ಟಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಬುಧವಾರ ರಾತ್ರಿ ಪೋಸ್ಟ್ ಹಂಚಿಕೊಂಡ ಹಿಂದೂ ವ್ಯಕ್ತಿಯ ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ವಸ್ತುಗಳನ್ನು ಹೊರಗೆಸೆದು ಬೆಂಕಿ ಹಚ್ಚಿದ್ದಾರೆ. ಅಲ್ಲದೆ ಹಿಂದೂಗಳಿರುವ ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.