ADVERTISEMENT

ಗುಜರಾತ್‌ ಕಾಂಗ್ರೆಸ್‌ ಶಾಸಕನಿಗೆ 6 ತಿಂಗಳು ಜೈಲು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 16:33 IST
Last Updated 7 ಫೆಬ್ರುವರಿ 2023, 16:33 IST
.
.   

ಅಹಮದಾಬಾದ್‌: ಕಾಂಗ್ರೆಸ್‌ ಶಾಸಕ ವಿಮಲ್‌ ಚುಡಾಸಮಾ ಸೇರಿ ಮೂವರಿಗೆ 13 ವರ್ಷದ ಹಿಂದಿನ ಹಲ್ಲೆ ಮತ್ತು ಗಲಭೆ ಪ್ರಕರಣದಲ್ಲಿ ಆರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಜುನಾಗಢದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.

ತೀರ್ಪಿನ ಬೆನ್ನಲ್ಲೇ ಚುಡುಸಮಾ ಅವರು ಕೋರ್ಟ್‌ ಆದೇಶಕ್ಕೆ ತಡೆ ತಂದು ಸೆಷನ್‌ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚುಡಾಸಮಾ ಅವರು, ‘ಇದು ರಾಜಕೀಯ ಪ್ರೇರಿತ ಪ್ರಕರಣ. ನಾನು ಬಿಜೆಪಿ ಸೇರಬೇಕೆಂದು ಕೆಲವರು ಬಯಸಿದ್ದರು. ಆದರೆ ನಿರಾಕರಿಸಿದ ಕಾರಣ ನನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.