ADVERTISEMENT

ಜನರಿಗೆ ಪ್ರಧಾನಿ ಮೋದಿ ಮೇಲೆ ಅಪಾರ ನಂಬಿಕೆಯಿದೆ: ರಾಜನಾಥ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಡಿಸೆಂಬರ್ 2022, 5:28 IST
Last Updated 8 ಡಿಸೆಂಬರ್ 2022, 5:28 IST
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್   

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿರುವಂತೆಯೇ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂದು ಹೇಳಿದ್ದಾರೆ.

ಗುಜರಾತ್‌ನಲ್ಲಿ ನಾವು ಹೊಸ ದಾಖಲೆ ಸೃಷ್ಟಿಸುತ್ತಿದ್ದೇವೆ ಎಂದು ಸುದ್ದಿಸಂಸ್ಥೆ 'ಎಎನ್‌ಐ'ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮೇಲೆ ಜನರಿಗೆ ಅಪಾರ ನಂಬಿಕೆಯಿದೆ ಎಂದು ರಾಜನಾಥ್ ಹೇಳಿದರು.

ADVERTISEMENT

ಗುಜರಾತ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸುವ ಮೂಲಕ ಸತತ ಏಳನೇ ಬಾರಿಗೆ ಅಧಿಕಾರ ಹಿಡಿಯುವುದು ಖಚಿತವೆನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.