ಅಹಮದಾಬಾದ್: ಮಕ್ಕಳ ಆಸ್ಪತ್ರೆಯನ್ನು ಹೊಂದಿರುವ ಅಹಮದಾಬಾದ್‌ನ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳೂ ಸೇರಿದಂತೆ ಒಟ್ಟು 70 ಜನರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಪರಿಮಳ ಗಾರ್ಡನ್‌ಗೆ ಸಮೀಪದಲ್ಲಿರುವ ದೇವ್ ವಾಣಿಜ್ಯ ಸಂಕೀರ್ಣದಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಆವರಣದಲ್ಲಿ ದಟ್ಟ ಹೊಗೆ ಆವರಿಸಿದೆ.
'ನವಜಾತ ಶಿಶು ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ದಾಖಲಾಗಿದ್ದ ಮೂರು ಶಿಶುಗಳು, ಹತ್ತು ಮಕ್ಕಳು ಸೇರಿದಂತೆ, ಒಟ್ಟು 70 ಜನರನ್ನು ರಕ್ಷಿಸಿ, ಸ್ಥಳಾಂತರಿಸಲಾಗಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೋಗಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.