ADVERTISEMENT

ಕೋವಿಡ್‌ ಕೇಂದ್ರದಲ್ಲಿ ಬೆಂಕಿ, 61 ರೋಗಿಗಳ ಸ್ಥಳಾಂತರ

ಪಿಟಿಐ
Published 12 ಮೇ 2021, 5:14 IST
Last Updated 12 ಮೇ 2021, 5:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್‌: ಗುಜರಾತ್‌ನ ಭಾವನಗರದಲ್ಲಿ ಬುಧವಾರ ಬೆಳಿಗ್ಗೆ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಲ್ಲಿದ್ದ 61 ರೋಗಿಗಳನ್ನು ಸ್ಥಳಾಂತರಿಸಲಾಯಿತು.

ಬೆಂಕಿ ಆಕಸ್ಮಿಕ ಸಂಭವಿಸಿದಾಗ ಕೇಂದ್ರದಲ್ಲಿ 68 ರೋಗಿಗಳಿದ್ದರು. ಉಳಿದ 7 ಮಂದಿಯನ್ನು ಶೀಘ್ರವೇ ಸ್ಥಳಾಂತರಿಸಲಾಗುವುದು. ಘಟನೆಯಲ್ಲಿ ಯಾರಿಗೂ ಏನೂ ತೊಂದರೆ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೋಟೆಲ್‌ ಒಂದನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗಿತ್ತು. ಬೆಂಕಿ ಆಕಸ್ಮಿಕ ಸಣ್ಣ ಪ್ರಮಾಣದ್ದಾಗಿತ್ತು. ಮಧ್ಯರಾತ್ರಿ ವೇಳೆ ಟಿವಿ ಯೊಂದರಲ್ಲಿ ಕಿಡಿ ಕಾಣಿಸಿಕೊಂಡು ಬೆಂಕಿ ಹತ್ತಿಕೊಂಡಿತು. ದಟ್ಟ ಹೊಗೆ ಆವರಿಸಿತ್ತು. ಆದರೆ ತಕ್ಷಣ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಭಾವನಗರದ ಹಿರಿಯ ಅಗ್ನಿಶಾಮಕ ಅಧಿಕಾರಿ ಭರತ್‌ ಕಾನಡೆ ತಿಳಿಸಿದರು.

ADVERTISEMENT

ರಾಜ್ಯದ ಭರೂಚ್‌ನಲ್ಲಿ ಮೇ 1ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಕೋವಿಡ್‌ ರೋಗಿಗಳು ಮೃತಪಟ್ಟಿದ್ದರು. ಆಸ್ಪತ್ರೆಗಳ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಗುಜರಾತ್ ಹೈಕೋರ್ಟ್‌ ಮಂಗಳವಾರ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೂ ತೆಗೆದುಕೊಂಡಿತ್ತು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.