ಅಹಮದಾಬಾದ್: ಗುಜರಾತ್ ಹೈಕೋರ್ಟ್‌ಗೆ ಇಂದು ( ಸೋಮವಾರ) ಬಾಂಬ್ ಬೆದರಿಕೆ ಇ ಮೇಲ್ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್‌ನ ಸರ್ಖೇಜ್-ಗಾಂಧಿನಗರ ಹೆದ್ದಾರಿಯಲ್ಲಿರುವ ನ್ಯಾಯಾಲಯದ ಕಟ್ಟಡದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಗುಜರಾತ್ ಹೈಕೋರ್ಟ್‌ನ ಅಧಿಕೃತ ಇ–ಮೇಲ್ ಐಡಿಗೆ ಇಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸಂದೇಶ ಕಳುಹಿಸಿದ್ದಾರೆ ಎಂದು ಸೋಲಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೆ.ಎನ್. ಭೂಕನ್ ತಿಳಿಸಿದ್ದಾರೆ.
ಬೆದರಿಕೆ ಸಂದೇಶ ಬಂದ ಕೂಡಲೇ, ಸ್ಥಳೀಯ ಪೊಲೀಸರು ಶ್ವಾನ ದಳ ಮತ್ತು ಬಾಂಬ್ ಪತ್ತೆ ಹಚ್ಚುವವರೊಂದಿಗೆ ಸ್ಥಳಕ್ಕೆ ತಲುಪಿದರು. ನ್ಯಾಯಾಲಯದ ಆವರಣವನ್ನು ಅಲ್ಲಿನ ಕಟ್ಟಡಗಳನ್ನು ಪರಿಶೀಲಿಸಲಾಯಿತು. ಆದರೆ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಪೊಲೀಸರು ತಿಳಿಸಿದ್ದಾರೆ.
ಗುಜರಾತ್ ಹೈಕೋರ್ಟ್‌ಗೆ ಈ ವರ್ಷದ ಜೂನ್‌ನಿಂದ ಇಲ್ಲಿಯವರೆಗೂ ಮೂರು ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.