ADVERTISEMENT

ಗುಜರಾತ್‌: ಮತ್ತಿಬ್ಬರಲ್ಲಿ ಓಮೈಕ್ರಾನ್ ಪತ್ತೆ, ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ

ಪಿಟಿಐ
Published 10 ಡಿಸೆಂಬರ್ 2021, 9:47 IST
Last Updated 10 ಡಿಸೆಂಬರ್ 2021, 9:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಾಮ್‌ನಗರ: ಗುಜರಾತ್‌ನಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಒಂದು ವಾರದ ಹಿಂದೆ ಸೋಂಕಿತರಾಗಿದ್ದ ಎನ್‌ಆರ್‌ಐ ವ್ಯಕ್ತಿಯ ಪತ್ನಿ ಹಾಗೂ ಭಾವನಿಗೆ ಓಮೈಕ್ರಾನ್ ದೃಢಪಟ್ಟಿದೆ ಎಂದು ಜಾಮ್‌ನಗರ ಮುನ್ಸಿಪಲ್ ಕಾರ್ಪೊರೇಷನ್ (ಜೆಎಂಸಿ) ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುಜರಾತ್‌ನ ಗಾಂಧಿನಗರದಲ್ಲಿರುವ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್‌ನಲ್ಲಿ (ಜಿಬಿಆರ್‌ಸಿ) ನಡೆಸಿದ ಜಿನೋಮ್ ಸೀಕ್ವೆನ್ಸಿಂಗ್ ಫಲಿತಾಂಶದಲ್ಲಿ ಇಬ್ಬರಲ್ಲೂ ಓಮೈಕ್ರಾನ್ ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅವರನ್ನು ಗುರು ಗೋವಿಂದ್ ಸಿಂಗ್ ಸರ್ಕಾರಿ ಆಸ್ಪತ್ರೆಯ ಓಮೈಕ್ರಾನ್‌ನ ಪ್ರತ್ಯೇಕ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ಜೆಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಡಿಸೆಂಬರ್ 4ರಂದು ಜಿಂಬಾಬ್ವೆಯಿಂದ ಜಾಮ್‌ನಗರಕ್ಕೆ ಬಂದಿರುವ 72 ವರ್ಷದ ವ್ಯಕ್ತಿಯಲ್ಲಿ ಓಮೈಕ್ರಾನ್ ಸೋಂಕು ದೃಢಪಟ್ಟಿತ್ತು. ಇದಾದ ಬೆನ್ನಲ್ಲೇ ಆತನ ಪತ್ನಿ ಹಾಗೂ ಭಾವನಲ್ಲೂ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಓಮೈಕ್ರಾನ್ ಪತ್ತೆಗಾಗಿ ಸ್ಯಾಂಪಲ್‌ಗಳನ್ನು ಜಿಬಿಆರ್‌ಸಿಗೆ ರವಾನಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.