ADVERTISEMENT

ಗುಜರಾತ್‌ ಪಂಚಾಯಿತಿ: ಚುನಾವಣೆಯಲ್ಲಿ ಒಂದೇ ಮತ ಪಡೆದ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 8:39 IST
Last Updated 22 ಡಿಸೆಂಬರ್ 2021, 8:39 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಅಹಮದಾಬಾದ್‌: ಗುಜರಾತ್‌ ರಾಜ್ಯದ ಸ್ಥಳೀಯ ಸಂಸ್ಥೆ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರು ಒಂದೇ ಮತ ಪಡೆದಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸಂತೋಷ್‌ ಹಲಪಟ್ಟಿ ತಮ್ಮ ಒಂದು ಮತವನ್ನು ಮಾತ್ರ ಪಡೆದಿದ್ದಾರೆ. ಅವರು ಛಾರವಾಲ ಗ್ರಾಮಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಸಂತೋಷ್‌ ಅವರ ಕುಟುಂಬದಲ್ಲಿ ಒಟ್ಟು 12 ಜನರು ಇದ್ದಾರೆ. ಆದರೆ ಯಾರೂಸಂತೋಷ್‌ಗೆ ಮತ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಚುನಾವಣೆಗಳು ಬರುತ್ತವೆ, ಹೋಗುತ್ತವೆ ಇದರಲ್ಲಿ ನಾನು ಸೋತಿರುವುದಕ್ಕೂ ಹಾಗೂಮನೆಯವರು ಮತ ನೀಡದಿರುವುದಕ್ಕೂಬೇಸರ ಇಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

ಗುಜರಾತ್‌ ರಾಜ್ಯದಲ್ಲಿ ಇತ್ತೀಚೆಗೆ ಪಂಚಾಯಿತಿ ಚುನಾವಣೆ ನಡೆದಿತ್ತು. ಸುಮಾರು 6 ಸಾವಿರ ಪಂಚಾಯಿತಿಗಳ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಮೇಲುಗೈ ಸಾಧಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.