ಬಂಧಿತ ಉಗ್ರರು
Credit: X/@ANI
ಅಹಮದಾಬಾದ್: ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಜತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಅಲ್–ಖೈದಾ ಭಯೋತ್ಪಾದಕ ಸಂಘಟನೆಯ ಜಾಲವನ್ನು ಭೇದಿಸಿದ್ದೇವೆ. ಅಲ್–ಖೈದಾ ಜತೆಗೆ ನಿರಂತರವಾಗಿ ಸಂಪರ್ಕ ಹೊಂದಿದ್ದ ನಾಲ್ವರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದೇವೆ’ ಎಂದು ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಫೈಕ್, ಗುಜರಾತ್‌ನ ಮೊಹಮ್ಮದ್ ಫರ್ದೀನ್, ಸೆಫುಲ್ಲಾ ಕುರೇಶಿ ಮತ್ತು ಉತ್ತರ ಪ್ರದೇಶದ ನೋಯ್ಡಾದ ಜೀಶನ್ ಅಲಿ ಎಂದು ಗುರುತಿಸಲಾಗಿದೆ.
2024ರ ಮೇ 20ರಂದು ಅಹಮದಾಬಾದ್‌ನ ಸರದಾರ್ ವಲ್ಲಭಭಾಯ್ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐಎಸ್ ಉಗ್ರರನ್ನು ಎಟಿಎಸ್ ಬಂಧಿಸಿತ್ತು.
2023ರಲ್ಲಿ ಅಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಎಟಿಎಸ್ ಬಂಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.