ಅಹಮದಾಬಾದ್: ಅಹಮದಾಬಾದ್ನ ಅಪರಾಧ ಪತ್ತೆ ವಿಭಾಗ (ಡಿಸಿಬಿ) ಮತ್ತು ರೆವಿನ್ಯೂ ಗುಪ್ತಚರ ನಿರ್ದೇಶನಾಲಯವು (ಡಿಆರ್ಐ) ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ, ಸುಮಾರು ₹ 150 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ.
‘ಕೆಟಮೈನ್ ಮತ್ತು ಕೊಕೇನ್ ಅನ್ನು ಬೃಹತ್ ಪ್ರಮಾಣದಲ್ಲಿ ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ದಾಳಿ ನಡೆಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಇದಲ್ಲದೇ, ಮಾದಕ ವಸ್ತು ಉತ್ಪಾದಿಸಲು ಬಳಸಲಾಗುತ್ತಿದ್ದ ₹ 350 ಕೋಟಿ ಮೌಲ್ಯದ ಉಪಕರಣಗಳನ್ನು ಸಹ ಜಪ್ತಿ ಮಾಡಲಾಗಿದೆ’ ಎಂದಿವೆ.
‘ಆರೋಪಿಗಳು ನಿಷೇಧಿತ ಮಾದಕ ವಸ್ತು ಉತ್ಪಾದನೆ ಮಾಡಿ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಹಾಗೂ ಇತರ ರಾಜ್ಯಗಳಿಗೆ ವಿತರಸುತ್ತಿದ್ದರು’ ಎಂದೂ ವಿವರಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.