ADVERTISEMENT

Gujarat Polls: ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಪ್ರಧಾನಿ ಮನವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2022, 4:23 IST
Last Updated 5 ಡಿಸೆಂಬರ್ 2022, 4:23 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಅಹಮದಾಬಾದ್: ಗುಜರಾತ್ ವಿಧಾನಸಭೆಗೆ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ.

ಇದರಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದಲ್ಲಿ ವಿಶೇಷವಾಗಿಯೂ ಯುವ ಮತದಾರರುಹಾಗೂ ಮಹಿಳೆಯರು ಹೆಚ್ಚಿನಸಂಖ್ಯೆಯಲ್ಲಿ ಮತ ಚಲಾಯಿಸಲು ಮನವಿ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ADVERTISEMENT

ಪ್ರಧಾನಿ ಮೋದಿ ಅವರು ಅಹಮದಾಬಾದ್‌ನ ರಾಣಿಪ್ ಪ್ರದೇಶದ ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿ ಮತ ಚಲಾಯಿಸಿದರು.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶಿಲಾಜ್ ಅನುಪಮ್ ಶಾಲೆಯ ಬೂತ್ ಸಂಖ್ಯೆ 95ರಲ್ಲಿ ಮತದಾನ ಮಾಡಿದರು. ಗೃಹ ಸಚಿವ ಅಮಿತ್ ಶಾ ಸಹ ಇಂದು ಮತ ಚಲಾಯಿಸಲಿದ್ದಾರೆ.

ಗುಜರಾತ್ ವಿಧಾನಸಭೆಯ 93 ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ.

ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರ ಹಾಗೂ ಐದು ರಾಜ್ಯಗಳ 6 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.