ಅಹಮದಾಬಾದ್: ಪ್ರಧಾನಿ ನರೇಂದ್ರಮೋದಿಯವರ ತಾಯಿ ಹೀರಾಬೆನ್ ನಿಧನರಾಗಿದ್ದು, ಅಂತಿಮ ದರ್ಶನ ಪಡೆಯಲು ಮೋದಿ ಗಾಂಧಿನಗರಕ್ಕೆ ಆಗಮಿಸಿದ್ದಾರೆ.
ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರು ಇಂದು ಬೆಳಗಿನ ಜಾವ ಅಹಮದಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 100 ವರ್ಷ ವಯಸ್ಸಾಗಿತ್ತು.
ಮೋದಿ ಅವರ ಸಹೋದರ ಸೋಮಭಾಯ್ ಮೋದಿ ಸೇರಿದಂತೆ ಕುಟುಂಬ ಸದಸ್ಯರು ನಿವಾಸಕ್ಕೆ ಆಗಮಿಸಿದ್ಧಾರೆ.
'ಶ್ರೀಮತಿ ಹೀರಾಬೆನ್ ಮೋದಿ ಅವರು 2022ರ ಡಿಸೆಂಬರ್ 30ರಂದು ಬೆಳಗಿನ ಜಾವ 3.39ಕ್ಕೆ ನಿಧನರಾಗಿದ್ದಾರೆ' ಎಂದು ಆಸ್ಪತ್ರೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಅನಾರೋಗ್ಯದ ವಿಷಯ ತಿಳಿದು ದೆಹಲಿಯಿಂದ ಅಹಮದಾಬಾದ್‌ಗೆ ಪ್ರಯಾಣ ಬೆಳೆಸಿದ್ದ ಮೋದಿ ಅವರು ಬುಧವಾರ ಮಧ್ಯಾಹ್ನವೇ ಆಸ್ಪತ್ರೆಗೆ ಭೇಟಿ ನೀಡಿ, ಸುಮಾರು ಒಂದೂವರೆ ಗಂಟೆ ಅಲ್ಲೇ ಇದ್ದರು. ಅಮ್ಮನ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.