
ಪಿಟಿಐ
ಬಂಧನ
ಅಹಮದಾಬಾದ್ (ಪಿಟಿಐ): ನೇಪಾಳದಲ್ಲಿ ಕಳೆದ ವರ್ಷ ನಡೆದ ‘ಜೆನ್ ಜಿ’ ಪ್ರತಿಭಟನೆ ವೇಳೆ ಅಲ್ಲಿನ ಜೈಲಿನಿಂದ ತಪ್ಪಿಸಿಕೊಂಡಿದ್ದ ಗುಜರಾತ್‌ನ ವ್ಯಕ್ತಿ ಅಹಮದಾಬಾದ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪರಾಧ ದಳದ ವಿಶೇಷ ಕಾರ್ಯಾಚರಣೆ ತಂಡವು ಆರೋಪಿ ಧರ್ಮೇಶ್ ಚುನಾರಾನನ್ನು ಬಂಧಿಸಿದೆ ಎಂದು ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಜೈಲಿನಿಂದ ತಪ್ಪಿಸಿಕೊಂಡ ಬಳಿಕ ಭಾರತ–ನೇಪಾಳ ಸೋನೌಲಿ ಗಡಿಯಿಂದ ಭಾರತಕ್ಕೆ ಪ್ರವೇಶಿಸಿ ಅಲ್ಲಿಂದ ಅಹಮದಾಬಾದ್‌ಗೆ ಬಂದಿರುವುದಾಗಿ ಆರೋಪಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಮತ್ತಷ್ಟು ವಿಚಾರಣೆಗಾಗಿ ಆತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.