ADVERTISEMENT

ಜಮ್ಮುವಿನಲ್ಲಿ ಗುಂಡಿನ ಚಕಮಕಿ: ಉಗ್ರನ ಹತ್ಯೆ, ಪೊಲೀಸರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 31 ಜನವರಿ 2020, 3:57 IST
Last Updated 31 ಜನವರಿ 2020, 3:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ:ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದ ಉಗ್ರರ ಗುಂಪು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್ ಪ್ಲಾಜಾ ಒಂದರ ಬಳಿ ಪೊಲೀಸರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದೆ. ಈ ಘಟನೆಯಲ್ಲಿ ಉಗ್ರನೊಬ್ಬ ಹತನಾಗಿದ್ದು, ಪೊಲೀಸರೊಬ್ಬರು ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದರೆ, ಉಳಿದ 3 ಉಗ್ರರು ಪಕ್ಕದ ಅರಣ್ಯ ಪ್ರದೇಶದಲ್ಲಿ ಪರಾರಿಯಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್‌ಬಾಗ್ ಸಿಂಗ್ ತಿಳಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಪರಾರಿಯಾಗಿರುವ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಬಜೆಟ್ ಮಾಹಿತಿಗೆ: www.prajavani.net/budget-2020

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.