ADVERTISEMENT

ಅಪ್ರಾಪ್ತೆಯನ್ನು ಕಟ್ಟಿಹಾಕಿ ಅತ್ಯಾಚಾರ ಎಸಗಿದ 16 ವರ್ಷದ ಬಾಲಕ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 9:09 IST
Last Updated 17 ನವೆಂಬರ್ 2019, 9:09 IST
   

ಗುರುಗ್ರಾಮ: 16 ವರ್ಷದ ಬಾಲಕ ತನ್ನ ಸೋದರ ಸಂಬಂಧಿ ಬಾಲಕಿಯನ್ನು ಕಟ್ಟಿಹಾಕಿ ಅತ್ಯಾಚಾರ ಎಸಗಿರುವ ಘಟನೆ ಗುರುಗ್ರಾಮದ ಸೆಕ್ಟರ್ 51 ಪ್ರದೇಶದಲ್ಲಿ ನಡೆದಿದೆ.

ಗುರುವಾರ ಘಟನೆ ನಡೆದಿದ್ದು, ಶಾಲೆಗೆ ತೆರಳಿದ 15 ವರ್ಷದ ಬಾಲಕಿಯು ತನ್ನ ಶಿಕ್ಷಕಿಯೊಂದಿಗೆ ಘಟನೆಯನ್ನು ವಿವರಿಸಿದ ಬಳಿಕ ಬಾಲಕನ ಕೃತ್ಯ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ತಾಯಿ ತನ್ನ ಸಂಬಂಧಿ ಪುತ್ರನ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ ಎಂದು ಗುರುಗ್ರಾಮದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮಹಿಳೆಯು ತನ್ನ ಸಂಬಂಧಿಗೆ ಹುಷಾರಿಲ್ಲದ ಕಾರಣದಿಂದಾಗಿ ಮನೆಗೆಲಸಕ್ಕೆ ಸಹಾಯವಾಗಲಿ ಎಂದು ಬಾಲಕಿಯನ್ನು ಅವರ ಮನೆಗೆ ಕಳುಹಿಸಿದ್ದರು. ಬಳಿಕ ಆಕೆಯು ಆಸ್ಪತ್ರೆಗೆ ತೆರಳಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಬಾಲಕ ಬಾಲಕಿಯನ್ನು ಎಳೆದುತಂದು ಕೈ ಮತ್ತು ಕಾಲುಗಳನ್ನು ಕಟ್ಟಿಹಾಕಿ ಕೃತ್ಯ ಎಸಗಿದ್ದಾನೆ.

ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.