ಅತ್ಯಾಚಾರ
ಸಾಂದರ್ಭಿಕ ಚಿತ್ರ
ಗುರುಗ್ರಾಮ: ಮಗಳ ಮೇಲೆ ಅತ್ಯಾಚಾರ ಎಸಗಿದ ತಂದೆಗೆ ಇಲ್ಲಿನ ನ್ಯಾಯಾಲಯವೊಂದು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚುವರಿ ಸೆಷನ್ ನ್ಯಾಯಾಧೀಶರಾದ ಜಾಸ್ಮೀನ್ ಶರ್ಮಾ ಗುರುವಾರ ಈ ಆದೇಶ ನೀಡಿದ್ದು, ₹ 50 ಸಾವಿರ ದಂಡವನ್ನೂ ವಿಧಿಸಿದ್ದಾರೆ.
16 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ, ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಅಪರಾಧಿ ವಿರುದ್ಧ 2023ರ ಆಗಸ್ಟ್ 2023ರಂದು ಅಂಗನವಾಡಿ ಕಾರ್ಯಕರ್ತೆ ದೂರು ನೀಡಿದ್ದರು.
ದೂರಿನ ಬಳಿಕ ಪೋಕ್ಸೊ ಕಾಯ್ದೆಯ ವಿವಿಧ ಕಲಂಗಳಡಿ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಪ್ರಾರಂಭಿಸಿದರು. ಕೆಲ ದಿನಗಳ ಬಳಿಕ ಪೊಲೀಸರು ಪಶ್ಚಿಮ ಬಂಗಾಳ ನಿವಾಸಿಯನ್ನು ಬಂಧಿಸಿದ್ದರು.
ಇದಾದ ಬಳಿಕ ಪೊಲೀಸ್ ತಂಡವು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿ, ಆರೋಪಿಯ ವಿರುದ್ಧ ಅಗತ್ಯವಿರುವ ಎಲ್ಲಾ ಸಾಕ್ಷ್ಯಗಳು ಸಂಗ್ರಹಿಸಿ, ನ್ಯಾಯಾಲಯದಲ್ಲಿ ಆತನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತು.
‘ಸಲ್ಲಿಸಿದ ದೋಷಾರೋಪ ಪಟ್ಟಿ ಹಾಗೂ ಸಂಗ್ರಹಿಸಿದ ಸಾಕ್ಷ್ಯಗಳು ಪರಿಶೀಲಿಸಿದ ಬಳಿಕ ಹೆಚ್ಚುವರಿ ನ್ಯಾಯಾಧೀಶರು ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದ್ದಾರೆ’ ಎಂದು ಗುರುಗ್ರಾಮ ಪೊಲೀಸ್ ವಕ್ತಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.